ಮಂತ್ರಾಲಯದಲ್ಲಿ ನೀರಿನ ಅಭಾವಕ್ಕೆ ಬ್ರೇಕ್: ರಾಯರ ಮಠದಿಂದ 50 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಕುಡಿಯುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೃಹತ್ ಯೋಜನೆಯೊಂದನ್ನು ಕೈಗೆತ್ತಿಕೊಳ್ಳಲಾಗಿದೆ. ‌ ತುಂಗಭದ್ರಾ ನದಿಯಿಂದ ಮಳೆಗಾಲದಲ್ಲಿ ಹರಿದುಬರುವ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳುವ ಉದ್ದೇಶದಿಂದ ಶ್ರೀಮಠದ 40 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಬೃಹತ್ ‘ಇಂಪೌಂಡಿಂಗ್ ರಿಸರ್ವೈಯರ್’ (ಸಂಗ್ರಹಣಾ ಜಲಾಶಯ) ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದನ್ನೂ ಓದಿ: … Continue reading ಮಂತ್ರಾಲಯದಲ್ಲಿ ನೀರಿನ ಅಭಾವಕ್ಕೆ ಬ್ರೇಕ್: ರಾಯರ ಮಠದಿಂದ 50 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಚಾಲನೆ!