BIG NEWS | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಬ್ರೇಕ್: ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಿ ಅನುಮೋದಿಸಲಾಗಿದೆ. ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು.

ಇಂದು ರಾಜ್ಯ ಸರ್ಕಾರದಿಂದ ಕಳುಹಿಸಲಾಗಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!