ಸರಣಿ ಕ್ಲೀನ್‌ ಸ್ವೀಪ್ ಗೆ ಬ್ರೇಕ್: ಸಿಡ್ನಿ ಟೆಸ್ಟ್‌ ಡ್ರಾನಲ್ಲಿ ಅಂತ್ಯ, ಭಾರತಕ್ಕೆ ಮತ್ತೆ ಟೆಸ್ಟ್ ಚಾಂಪಿಯನ್‌ಶಿಪ್‌ ಚಾನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ.

ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಕಾಂಗರೂ ಪಡೆಗೆ ನಿರಾಸೆ ಎದುರಾಗಿದೆ.ಇದರಿಂದ ಟೀಂ ಇಂಡಿಯಾಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡನೇ ಬಾರಿಗೆ ಫೈನಲ್‌ಗೇರುವ ಕನಸಿಗೆ ಮತ್ತಷ್ಟು ಜೀವ ಬಂದಂತೆ ಆಗಿದೆ.

ಹೌದು, ದಕ್ಷಿಣ ಆಫ್ರಿಕಾ ಎದುರು ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಮೂಲಕ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದ್ದ ಆಸ್ಟ್ರೇಲಿಯಾ, ಸರಣಿ ಕ್ಲೀನ್‌ ಸ್ವೀಪ್ ಮಾಡುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದಿತ್ತು. ಆದರೆ ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಮೂರನೇ ದಿನ ಮಳೆ ಅಡ್ಡಿ ಪಡಿಸಿದ್ದರಿಂದ, ಸರಣಿ ಡ್ರಾನಲ್ಲಿ ಅಂತ್ಯವಾಗಿದೆ.

ಸದ್ಯ ಪ್ಯಾಟ್ ಕಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು, ಅಂಕಪಟ್ಟಿಯಲ್ಲಿ 75.56% ಅಂಕಗಳನ್ನು ಕಾಯ್ದುಕೊಳ್ಳುವ ಮೂಲಕ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿರುವುದರಿಂದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ,ಎರಡನೇ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೇರುವ ಆಸೆಗೆ ಮತ್ತಷ್ಟು ಜೀವ ಬರುವಂತೆ ಮಾಡಿದೆ. ಭಾರತ ಸದ್ಯ 58.93% ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದ್ದು, ಶ್ರೀಲಂಕಾ 53.33% ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!