February 21, 2026
Saturday, February 21, 2026
spot_img

ಇಂದು ಡಿಕೆಶಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಬಾಡೂಟ, ಸಿಎಂ ಅತಿಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶನಿವಾರವಷ್ಟೇ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆ ಮೇರೆಗೆ ಡಿಸಿಎಂ ಡಿಕೆ ಶಿವಕುಮಾರ್​​​​ಗೆ ತಮ್ಮ ನಿವಾಸದಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್ ಆಯೋಜಿಸಿದರು. ಇಡ್ಲಿ ವಡೆ, ಕೇಸರಿ ಬಾತ್, ಉಪ್ಪಿಟ್ಟು ಸವಿದು ಒಟ್ಟಿಗೆ ಫೋಟೋಗೆ ಫೋಸ್ ಕೊಟ್ಟಿದ್ದರು.

ತಿಂಡಿ ಬಳಿಕ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿ ಹೊರಗೆ ಬಂದವರೇ, ನಮ್ಮಲ್ಲಿ ಗೊಂದಲ ಇಲ್ಲ ಎಂದು ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಇದೀಗ ಡಿಕೆ ಶಿವಕುಮಾರ್ ಹೇಳಿದಂತೆಯೇ, ಇಂದು ಅವರ ನಿವಾಸದಲ್ಲಿ ಸಿಎಂಗಾಗಿ ಬೆಳಗ್ಗೆ 9:30ಕ್ಕೆ ಬ್ರೇಕ್​ಫಾಸ್ಟ್ ಆಯೋಜಿಸಿದ್ದಾರೆ. ಸಿದ್ದರಾಮಯ್ಯಗೆ ಇಷ್ಟವಾದ ನಾಟಿ ಕೋಳಿ ರೆಸಿಪಿಯನ್ನೇ ರೆಡಿ ಮಾಡಿಸಲಾಗುತ್ತಿದೆಯಂತೆ.

ನಾನು ಮತ್ತು ಮುಖ್ಯಮಂತ್ರಿಗಳು ಒಟ್ಟಾಗಿ, ಒಂದು ತಂಡವಾಗಿ ಕೆಲಸ ಮಾಡುತ್ತೇವೆ. ಅದನ್ನು ಮುಂದುವರಿಸುತ್ತೇವೆ. ಕರ್ನಾಟಕಕ್ಕೆ ನಾವು ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ, ನಮ್ಮ ಸಾಮೂಹಿಕ ಪ್ರಯತ್ನಗಳ ಬಲ ಹೆಚ್ಚಿಸುವ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಉಪಾಹಾರಕ್ಕೆ ಆಹ್ವಾನಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಸೋಮವಾರ ತಿಳಿಸಿದ್ದರು.

ಸಿಎಂ ಹಾಗೂ ಡಿಸಿಎಂ ನಡುವಣ ಈ ಸಭೆಗಳು ಗೊಂದಲ ಬಗೆಹರಿಯುತ್ತಿರುವುದರ ಮುನ್ಸೂಚನೆ ಎಂದು ಕಾಂಗ್ರೆಸ್ ಪಡೆ ನಂಬಿದೆ. ಹೀಗಾಗಿ ಮಾಜಿ ಸಂಸದ ಡಿಕೆ ಸುರೇಶ್, ಎಲ್ಲ ಸಸೂತ್ರವಾಗಿ ನಡೀತಿದೆ. ಬ್ರೇಕ್‌ಫಾಸ್ಟ್ ಆಗ್ತಿದೆ ಎಂದಿದ್ದಾರೆ. ಮತ್ತೊಂದೆಡೆ ಸಚಿವ ದಿನೇಶ್ ಗುಂಡೂರಾವ್, ಇದು ರಾಜಕೀಯಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !