BREAKING NEWS | ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಸಿತಗೊಂಡಿದೆ. ಈ ಪರಿಣಾಮವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಹಾಸನ ಜಿಲ್ಲಾಡಳಿತ ಆದೇಶಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿತಗೊಂಡಿದ್ದ ಕಾರಣ, ಅದರ ರಿಪೇರಿ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ.
ರಸ್ತೆ ಕುಸಿತಗೊಂಡಿದ್ದಂತ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ಧರು. ಈ ಬಳಿಕ ನಾಲ್ಕು ದಿನಕ್ಕೆ ಮತ್ತೆ ಭೂ ಕುಸಿತಗೊಂಡಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ಭೂ ಕುಸಿತಗೊಂಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!