ಪಿಎಫ್‌ಐ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಸ್ಥೆಗಳೆಂದು ಘೋಷಿಸಿ 5 ವರ್ಷಗಳ ಅವಧಿಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ನಾಸಿರ್ ಪಾಷಾ ಎಂಬ ಪಿಎಫ್‌ಐ ಕಾರ್ಯಕರ್ತನೊಬ್ಬ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವುದರಿಂದ ಅವರ ಪತ್ನಿ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!