ಹೊಸದಿಗಂತ ಆನ್ ಲೈನ್ ಡೆಸ್ಕ್:
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ 2019ರಲ್ಲಿ ಭಾರತದಿಂದ ನಡೆದಿದ್ದ ಬಾಲಾಕೋಟ್ ಏರ್ಸ್ಟ್ರೈಕ್ನಲ್ಲಿ ಪಾಕಿಸ್ತಾನದ 300 ಉಗ್ರರು ಸಾವನ್ನಪ್ಪಿದ್ದರು ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ವಾಹಿನಿಯೊಂದರ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡುತ್ತಿರುವ ವೇಳೆಯಲ್ಲಿ 300 ಭಯೋತ್ಪಾದಕರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಭಾರತದ ದಾಳಿಯ ನಂತರ ಯಾವುದೇ ಸಾವು ನೋವು ಸಂಭವಿಸಿರಲಿಲ್ಲವೆಂದು ಸುಳ್ಳು ಹೇಳಿದ್ದ ಪಾಕಿಸ್ತಾನ ಬಣ್ಣ ಮತ್ತೊಮ್ಮೆ ಬಯಲಾಗಿದೆ.
ಪುಲ್ವಾಮಾ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರ ಸಾವಿಗೆ ಪ್ರತಿಯಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಏರ್ಸ್ಟ್ರೈಕ್ ನಡೆಸಿತ್ತು. ಭಾರತೀಯ ವಾಯುಸೇನೆ ಗಡಿ ರೇಖೆ ದಾಟಿ ಪಾಕಿಸ್ತಾನದ ಒಳಗಡೆ ನುಗ್ಗಿ ಅನೇಕ ಉಗ್ರರ ಸದೆಬಡೆದಿತ್ತು.
ಫೆಬ್ರವರಿ 26ರ 2019ರಲ್ಲಿ ಭಾರತೀಯ ವಾಯುಪಡೆಯಿಂದ ಬಾಲಾಕೋಟ್ನಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರರ ಕ್ಯಾಂಪ್ಗಳ ಮೇಲೆ ದಾಳಿ ನಡೆಸಲಾಗಿತ್ತು.