Sunday, August 14, 2022

Latest Posts

BREAKING NEWS | ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್ ಐ ಟಿ ತಂಡದಿಂದ ಭರ್ಜರಿ ಬೇಟೆ, ನಾಲ್ವರು ವಶಕ್ಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐ ಟಿ ತಂಡ ಮೊದಲ ದಿನವೇ ಬೇಟೆ ಆರಂಭಿಸಿದ್ದು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಯುವತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss