BREAKING NEWS | ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಜಮ್ಮು ಮತ್ತು ಕಾಶ್ಮೀರದಲ್ಲಿ ಪೂಂಚ್ ಸೆಕ್ಟರ್‌ನಲ್ಲಿ ಸೇನಾ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರರಿಂದ ನಾಲ್ಕು ಸೈನಿಕರು ಹುತಾತ್ಮರಾಗಿದ್ದಾರೆ.
ಬೆಂಕಿ ಸೇನಾ ಟ್ರಕ್ ಸುತ್ತ ಅವರಿಸುತ್ತಿದ್ದು, ಆನೇಕ ಸೈನಿಕರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.
ಬಿಜಿ ಸೆಕ್ಟರ್‌ನ ಭಟ್ಟ ದುರಿಯನ್ ಅರಣ್ಯದ ಬಳಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇಲ್ಲಿ ಉಗ್ರ ಕೃತ್ಯ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಸೇನಾ ಅಧಿಕಾರಿಗಳಿಂದ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ತಕ್ಷಣ ಕಾರ್ಯಾಚರಣೆ ನಡೆಯುತ್ತಿದ್ದು, ಸೇನೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!