Saturday, July 2, 2022

Latest Posts

BREAKING NEWS | ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ನಾಳೆ ವಹಿಸಲಿದ್ದಾರೆ.
ದೆಹಲಿಯಿಂದ ಆಗಮಿಸಿದ್ದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ , ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. . ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಬಿಜೆಪಿ ಶಾಸಕಾಂಗ ಸಭೆಯಲ್ಲಿ ವರಿಷ್ಠರ ಅಭಿಪ್ರಾಯವನ್ನು ವೀಕ್ಷಕರು ತಿಳಿಸಿದ್ದು, ಬಿ.ಎಸ್. ಯಡಿಯೂರಪ್ಪ ಕೂಡ ಬಸವರಾಜ ಬೊಮ್ಮಾಯಿ ಅವರ ಆಯ್ಕೆಗೆ ಸಹಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss