ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BREAKING NEWS| ಸಿಎಂ ಸ್ಥಾನ ಬದಲಾವಣೆ: ಮೌನ ಮುರಿದ ಯಡಿಯೂರಪ್ಪ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ‘ಸಿಎಂ ಮೌನ ಮುರಿದಿದ್ದಾರೆ.
ಟ್ವಿಟರ್ ನಲ್ಲಿ ಮನವಿ ಮಾಡಿದ ಯುಡಿಯೂರಪ್ಪ ಈ ವಿಚಾರದಲ್ಲಿ ಯಾರೂ ಕೂಡ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಯಡಿಯೂರಪ್ಪ ‘ ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ’ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss