ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಮಾರುಕಟ್ಟೆಗಳಲ್ಲಿ ನೂಕು ನುಗ್ಗಲನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.
ಈ ಮಾರ್ಗಸೂಚಿ ಅನ್ವಯ ರಾಜ್ಯದಾದ್ಯಂತ ಮೇ 2 ರಿಂದ ಸಂತೆ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಲಿದ್ದು, ಬೆಳಿಗ್ಗೆ ಆರು ಗಂಟೆ ಯಿಂದ ಸಂಜೆ ಆರು ಗಂಟೆಯ ವರೆಗೆ ಹಾಪ್ ಕಾಮ್ಸ್, ಎಲ್ಲಾ ಹಾಲಿನ ಬೂತುಗಳು, ತಳ್ಳುಗಾಡಿಗಳಲ್ಲಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಮಾರಾಟ ಮಾಡಬಹುದಾಗಿದೆ.
ಎಪಿಎಮ್ ಸಿ ಹಾಗೂ ದಿನಸಿ ಅಂಗಡಿಗಳ ವ್ಯಾಪಾರದ ಸಮಯದಲ್ಲೂ ಬದಲಾವಣೆ ಮಾಡಿದ್ದು, ಬೆಳ್ಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.