BREAKING NEWS| ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೂತನ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆಯಲ್ಲಿ ಎನ್​​ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ದಾಖಲು ಮಾಡಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಈ ಹುದ್ದೆ ಅಲಂಕಾರ ಮಾಡಿರುವ ಬುಡಕಟ್ಟು ಸಮುದಾಯದ ಪ್ರಥಮ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ದ್ರೌಪದಿ ಮುರ್ಮು ಅವರು ವಿಜೇತರಾಗಿ ಹೊರಹೊಮ್ಮುತ್ತಿರುವಂತೆ ದೇಶದ ವಿವಿಧ ಕಡೆಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಅವರ ತವರು ರಾಜ್ಯ ಒಡಿಶಾದಲ್ಲಿ ಇಂದು ಬೆಳಗ್ಗೆಯಿಂದಲೇ ಜನರು ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ.
ಮುರ್ಮು ಅವರು ದೇಶದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಿದ್ದಾರೆ ಮತ್ತು ಅತ್ಯುನ್ನತ ಹುದ್ದೆ ಅಲಂಕರಿಸಿದ ದೇಶದ ಎರಡನೇ ಮಹಿಳೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!