BREAKING NEWS | ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿ ಗೌಡ(86) ಅವರು ಇಂದು ನಿಧನರಾಗಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳಸಿ ಪರಿಸರ ಪ್ರೇಮಿ ಎಂದೇ ಖ್ಯಾತವಾಗಿದ್ದರು.

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು.

ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!