Thursday, July 7, 2022

Latest Posts

BREAKING NEWS: ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ MLC ಸಂದೇಶ್ ನಾಗರಾಜ್ ‘ಬಿಜೆಪಿ ಸೇರ್ಪಡೆ’

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಡುಪಿಯ ಮಾಜಿ ಶಾಸಕ ಕಾಂಗ್ರೆಸ್​​ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೋಲಾರದ ಮಾಜಿ ಸಚಿವ ವರ್ತೂರು ಪ್ರಕಾಶ್, ಜೆಡಿಎಸ್ ಮಾಜಿ ಶಾಸಕ ಮಾಲೂರು ಮಂಜುನಾಥ ಗೌಡ ಬಿಜೆಪಿ ಸೇರಿದ್ದಾರೆ. ಇವರಲ್ಲದೇ ಮಾಜಿ ಐಆರ್​​ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನಿ ಗೌಡ, ಮಾಜಿ ಸಚಿವ ಎಸ್.ಟಿ ಜಯರಾಂ ಪುತ್ರ ಅಶೋಕ್ ಜಯರಾಮ್ ಕೇಸರಿ ಪಡೆಗೆ ಸೇರ್ಪಡೆಯಾಗಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಸಚಿವರಾದಂತ ಡಾ.ಕೆ.ಸುಧಾಕರ್, ಮುನಿರತ್ನ, ಗೋಪಾಲಯ್ಯ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss