BREAKING NEWS | ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.

ಈ ಬಗ್ಗೆ ರಾಬರ್ಟ್‌ ವಾದ್ರಾ ಟ್ವೀಟ್ ಮಾಡಿದ್ದು,’ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿಗಾಗಿ ನೀವು ಯಾವಾಗಲೂ ನೆನಪಿನಲ್ಲಿರುತ್ತೀರಿ ಮತ್ತು ಪ್ರಗತಿಪರ ಬದಲಾವಣೆಗಳನ್ನು ನೀವು ದೇಶಕ್ಕೆ ತಂದಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!