Monday, October 2, 2023

Latest Posts

BREAKING NEWS: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಶೇ.35ಕ್ಕೆ ಹೆಚ್ಚಳ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.31ರಿಂದ 35ಕ್ಕೆ ಹೆಚ್ಚಿಸಿ ಆದೇಶಿಸಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2018 ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 1ನೇ ಜನವರಿ 2023ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.31ರಿಂದ ಶೇ.35ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ನಿರ್ಧರಿಸಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿ ನೀಡಲಾಗುತ್ತಿದ್ದರೆ, ಆ ಸ್ಥಗಿತ ವೇತನ ಬಡ್ತಿ ಎಂದಿದ್ದಾರೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನೀವೃತ್ತಿ ವೇತನ ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇಚನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ 1ನೇ ಜವರಿ 2023ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 31 ರಿಂದ ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ನಿರ್ಧರಿಸುತ್ತದೆ. ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೂ ಸಹ ಈ ಆದೇಶ ಅನ್ವಯಿಸುತ್ತವೆ ಎಂದಿದ್ದಾರೆ.

 

https://twitter.com/CMofKarnataka/status/1663506028313591815?ref_src=twsrc%5Etfw%7Ctwcamp%5Etweetembed%7Ctwterm%5E1663506028313591815%7Ctwgr%5Ea549fb20595fe206cb15c4f756675b7c70664318%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fhomee-updates-homee%3Fmode%3Dpwaaction%3Dclick

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!