BREAKING NEWS | ಸೇನಾ ವಾಹನ ಗುರಿಯಾಗಿಸಿ IED ಸ್ಫೋಟಿಸಿದ ನಕ್ಸಲರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಬಳಸಿ ಸ್ಫೋಟಿಸಿದ್ದಾರೆ. 9 ಮಂದಿ ಸೈನಿಕರು ಹುತಾತ್ಮಾಗಿದ್ದಾರೆ

ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯ ಕುತ್ರು ರಸ್ತೆಯಲ್ಲಿ ಘಟನೆ ನಡೆದಿದೆ. ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿಯಿದ್ದ ವಾಹನವನ್ನು ಐಇಡಿ ಬಳಸಿ ನಕ್ಸಲರು ಸ್ಫೋಟಿಸಿದ್ದಾರೆ .

ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡಿದ್ದು, 9 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಇನ್ನು ಈ ವೇಳೆ ಸುಮಾರು 15 ಸೇನಾ ಸಿಬ್ಬಂದಿ ವಾಹನದಲ್ಲಿದ್ದರು ಎಂದು ವರದಿಯಾಗಿದೆ. ಇನ್ನುಳಿದ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!