BREAKING NEWS : ಮೇ 27 ರಂದು ನೂತನ ಸಚಿವರ ಪ್ರಮಾಣ ವಚನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೇ 27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶೀಘ್ರ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದೆ. ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮ್ನಲ್ಲಿ ನಡೆಯುತ್ತಿದ್ದ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!