ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಹುದ್ದೆಗೆ ರೇಖಾ ಗುಪ್ತಾ ಅವರ ಹೆಸರು ಅಂತಿಮಗೊಂಡಿದೆ. ಹಾಗೇ, ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ವೀಕ್ಷಕರಾದ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧಂಕರ್ ಇಬ್ಬರೂ ಪಕ್ಷದ ಕಚೇರಿಯನ್ನು ತಲುಪಿದ ಬಳಿಕ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಘೋಷಣೆಯಾಗಿದೆ.
ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕರಾಗಿರುವ 50 ವರ್ಷದ ಗುಪ್ತಾ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಬಂದನಾ ಕುಮಾರಿ ಅವರನ್ನು ಸೋಲಿಸಿದ್ದರು.
ರೇಖಾ ಗುಪ್ತಾ ಅಲ್ಲದೆ, ಕೇಜ್ರಿವಾಲ್‌ರನ್ನು ಸೋಲಿಸಿದ್ದ ಪರ್ವೇಶ್ ವರ್ಮಾ, ಬಿಜೆಪಿಯ ಪಂಜಾಬಿ ಫೇಸ್ ಆಗಿರುವ ಅನೀಶ್ ಸೂದ್, ವಿಜೇಂದರ್ ಗುಪ್ತಾ ಹಾಗೂ ಸತೀಶ್ ಉಪಾಧ್ಯಾಯ ಹೆಸರು ಕೂಡ ಚರ್ಚೆಯಲ್ಲಿದ್ದವು.
ಸಭೆಯ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಯೊಂದಿಗೆ 6 ಮಂದಿ ಸಚಿವರು ಕೂಡ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.