BREAKING NEWS | ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿರೋಧ ಪಕ್ಷದ ನಾಯಕ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
342 ಸದಸ್ಯ ಬಲದ ಪಾಕಿಸ್ತಾನ ಸಂಸತ್ತು ‘ನ್ಯಾಷನಲ್ ಅಸೆಂಬ್ಲಿ’ಯಲ್ಲಿ ಪಿಟಿಐ ಪಕ್ಷದ ನಾಯಕ ಇಮ್ರಾನ್ ಖಾನ್ ವಿಶ್ವಾಸ ಮತಯಾಚನೆ ವೇಳೆ ಸೋಲು ಕಂಡಿದ್ದರು. ಹೀಗಾಗಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದೀಗ 174 ಸದಸ್ಯರ ಬೆಂಬಲ ಹೊಂದಿರುವ ಶಹಬಾಜ್​ ಷರೀಫ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಇಮ್ರಾನ್ ಖಾನ್​​ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ 70 ವರ್ಷದ ಶೆಹಬಾಜ್ ಷರೀಫ್​ ಹಾಗೂ ಪಿಟಿಐ ಪಕ್ಷದ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್​ ಖುರೇಷಿ ಪ್ರಧಾನಿ ರೇಸ್​ಗೋಸ್ಕರ ನಾಮಪತ್ರ ಸಲ್ಲಿಸಿದ್ದರು. ಆದರೆ, ಪ್ರಧಾನಿ ಅಭ್ಯರ್ಥಿ ಆಯ್ಕೆ ಮಾಡುವುದಕ್ಕೂ ಸ್ವಲ್ಪ ಸಮಯ ಮುಂಚಿತವಾಗಿ ಖುರೇಷಿ ರಾಷ್ಟ್ರೀಯ ಸಂಸತ್​ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಈ ರೇಸ್​ನಿಂದ ಹೊರಬಿದ್ದಿದ್ದರು. ಹೀಗಾಗಿ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆಯಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!