ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಐಸಿಸ್ ಉಗ್ರರನ್ನು ಬಂಧಿಸಲಾಗಿದೆ.
ಅನಂತನಾಗ್ ಜಿಲ್ಲೆಯಲ್ಲಿ ತನ್ವೀರ್ ಅಹ್ಮದ್ ಬಟ್, ಉಮರ್ ನಿಸಾರ್, ರಮಿಜ್ ಅಹಮದ್ ಲೋನ್ ಅವರನ್ನು NIA ಬಂಧಿಸಿದೆ. ಮೂವರೂ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ನಿವಾಸಿಗಳಾಗಿದ್ದು, ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದರು.
ಆನ್ ಲೈನ್ ಮೂಲಕ ಯುವಕರನ್ನು ಸೆಳೆದು ಐಸಿಸ್ ಗೆ ಸೇರಲು ಪ್ರಚೋದಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಎನ್ಐಎ ಕಾರ್ಯಾಚರಣೆ ನಡೆಸಿದ್ದು, ಮೂವರನ್ನು ಬಂಧಿಸಿ ಮಹತ್ವದ ದಾಖಲೆ ವಶಕ್ಕೆ ಪಡೆಯಲಾಗಿದೆ.