ದಕ್ಷಿಣ ಆಫ್ರಿಕಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟ: 10 ಸಾವು, 40 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪೂರ್ವದ ನಗರವಾದ ಬೋಕ್ಸ್‌ಬರ್ಗ್‌ನಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಹತ್ತು ಜನರು ಸಾವನ್ನಪ್ಪಿ ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಾಗಿಸುತ್ತಿದ್ದ ಟ್ಯಾಂಕರ್ ಆಸ್ಪತ್ರೆ ಮತ್ತು ಮನೆಗಳ ಸಮೀಪವಿರುವ ಸೇತುವೆಯ ಕೆಳಗೆ ಸಿಕ್ಕಿಬಿದ್ದಿದೆ.
ಗಾಯಗೊಂಡವರಲ್ಲಿ ಅರ್ಧದಷ್ಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದರೆ. ಆರು ಅಗ್ನಿಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಗ್ನಿಶಾಮಕ ಅಧಿಕಾರಿ ನಟ್ಲಾಡಿ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲದ್‌ ಆಗುತ್ತಿರುವ ವೀಡಿಯೊಗಳು ಸೇತುವೆಯ ಕೆಳಗೆ ದೊಡ್ಡ ಬೆಂಕಿಯ ಗೋಳ ಹರಡಿರುವುದನ್ನು ತೋರಿಸಿವೆ. ಟ್ಯಾಂಕರ್ 60,000 ಲೀಟರ್ ಎಲ್‌ಪಿಜಿ ಗ್ಯಾಸ್ ಅನ್ನು ಹೊತ್ತೊಯ್ಯುತ್ತಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!