Saturday, February 4, 2023

Latest Posts

BREAKING NEWS | ಜಮ್ಮು- ಕಾಶ್ಮೀರದಲ್ಲಿ ಶಂಕಿತ ಉಗ್ರರ ದಾಳಿ: 2 ಸಾವು, 6 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರು ಅಟ್ಟಹಾಸ ಮೆರೆದಿದ್ದು, ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರು ಗಾಯಗೊಂಡಿದ್ದಾರೆ.
ಇಲ್ಲಿನ ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ ದಾಳಿ ನಡೆದಿದೆ. ಬಂದೂಕು ಹಿಡಿದ ಕೆಲವರು ಕಾರಿನಲ್ಲಿ ಬಂದು ಆ ಪ್ರದೇಶದಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಭದ್ರತಾ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದು, ದಾಳಿ ನಡೆದ ಪ್ರದೇಶದ ಸುತ್ತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!