ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಸದ್ಯ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ. ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.