Saturday, April 1, 2023

Latest Posts

BREAKING NEWS| ಮಧ್ಯಪ್ರದೇಶದಲ್ಲಿ ಸುಖೋಯ್ ಮತ್ತು ಮಿರಾಜ್ ಯುದ್ಧ ವಿಮಾನ ಪತನ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದಲ್ಲಿ ಎರಡು ಯುದ್ಧ ವಿಮಾನಗಳು ಪತನಗೊಂಡಿವೆ. ಶನಿವಾರ (ಜನವರಿ 28, 2023), ಸುಖೋಯ್ -30 ಮತ್ತು ಮಿರಾಜ್ 2000 ವಿಮಾನಗಳು ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿವೆ.

ಈ ಬಗ್ಗೆ ಮಾಹಿತಿ ಪಡೆದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸಹಾಯ ಹಸ್ತ ಚಾಚಿದ್ದಾರೆ. ಈ ಅಪಘಾತ ಹೇಗೆ ಸಂಭವಿಸಿತು? ಯಾರಾದರೂ ಪ್ರಾಣ ಕಳೆದುಕೊಂಡಿದ್ದಾರೆಯೇ? ಮತ್ತಿತರ ವಿಷಯಗಳು ತಿಳಿಯಬೇಕಿದೆ. ಮಧ್ಯಪ್ರದೇಶದ ಗ್ವಾಲಿಯರ್ ವಾಯುನೆಲೆಯಿಂದ ಎರಡು ಫೈಟರ್ ಜೆಟ್‌ಗಳು ಹಾರಿದ್ದು, ಮಧ್ಯಪ್ರದೇಶದ ಮೆರೆನಾ ಬಳಿ ಪತನವಾಗಿವೆ. ಸುಖೋಯ್-30 ಮತ್ತು ಮಿರಾಜ್ 2000 ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು ಎಂದು ತಿಳಿದಿದೆ. ಆರಂಭಿಕ ವರದಿಗಳ ಪ್ರಕಾರ, ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿದ್ದು, ಮೂರನೇ ಪೈಲಟ್‌ ರಕ್ಷಿಸಲು ಹೆಲಿಕಾಪ್ಟರ್ ಕಳುಹಿಸಲಾಗಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಅಪಘಾತದ ಕುರಿತು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿದೆಯೇ? ಬೇರೆ ಕಾರಣವಿದೆಯೇ? ಇದು ಇನ್ನಷ್ಟೇ ತಿಳಿಯಬೇಕಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!