Friday, October 24, 2025

ಬ್ರೇಕಪ್ ಮಾಡ್ಕೊಂಡಿದ್ದೆ ತಪ್ಪಾಯ್ತು: ಮಾಜಿ ಗೆಳತಿಗೆ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವ್ಯಕ್ತಿಯೋರ್ವ ತನ್ನ ಮಾಜಿ ಗೆಳತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ನಂತರ ತನ್ನ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಇಂದು ನಡೆದಿದೆ.

ಆರೋಪಿಯನ್ನು ಕಲಾಚೌಕಿ ನಿವಾಸಿ ಸೋನು ಬರೈ ಎಂದು ಗುರುತಿಸಲಾಗಿದೆ. ಈತ 24 ವರ್ಷದ ಮನೀಶಾ ಯಾದವ್ ಬೆಳಿಗ್ಗೆ 11 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಆಕೆಯ ಮೇಲೆ ಹಲ್ಲೆನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಸೋನು ಬರೈ ಹಾಗು ಮನೀಶಾ ನಡುವಿನ ಸಂಬಂಧ ಮುರಿದುಬಿದ್ದ ಸುಮಾರು ಎರಡು ವಾರಗಳ ನಂತರ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮನೀಶಾ ಯಾದವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!