ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (81) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ. ಅವರ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.
ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಹಲವು ದಿಗ್ಗಜರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಪುತ್ರ ಯೋಗೀಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.