Monday, October 13, 2025

BREAKING | ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ : ಏಳು ಮಕ್ಕಳು ಸೇರಿ 10 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿಯಾದ ಪರಿಣಾಮ 7 ಮಕ್ಕಳು ಸೇರಿ 11 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ರಾಜಸ್ಥಾನದ ದೌಸಾ ಎಂಬಲ್ಲಿ ನಡೆದಿದೆ.

ಬುಧವಾರ (ಆ.13) ಬೆಳಗಿನ ಜಾವ 3:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಪಿಕಪ್ ವ್ಯಾನ್‌ನಲ್ಲಿ ಖತುಶ್ಯಾಮ್ಜಿ ದೇವಸ್ಥಾನದ ದರ್ಶನ ಪಡೆದು ಭಕ್ತರು ಹಿಂತಿರುಗುತ್ತಿದ್ದರು. ಈ ವೇಳೆ ನಿಲ್ಲಿಸಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಏಳು ಮಕ್ಕಳು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರ ಪೈಕಿ ಹೆಚ್ಚಿನವರು ಉತ್ತರಪ್ರದೇಶದ ಇಟಾವಾ ಜಿಲ್ಲೆಯವರು ಎಂದು ತಿಳಿಸಿದ್ದಾರೆ. ಇನ್ನೂ ಅಪಘಾತದಲ್ಲಿ 15ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ 9 ಜನರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

error: Content is protected !!