ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಯಂದಿರು ಮತ್ತು ಶಿಶುಗಳಿಗೆ ಈ ಕೊಠಡಿಗಳ ಬಗ್ಗೆ ರೈಲ್ವೆ ಸಚಿವಾಲಯ ತೆಗೆದುಕೊಂಡ ಕ್ರಮಗಳನ್ನು ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸಂಸದ ರವಿಚಂದ್ರ ವಡ್ಡಿರಾಜು ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದರು.
ಅದಕ್ಕುತ್ತರಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ದೇಶದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಹಾಲುಣಿಸುವ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದ 11 ನಿಲ್ದಾಣಗಳು ಸೇರಿದಂತೆ ದೇಶದಾದ್ಯಂತ 423 ರೈಲು ನಿಲ್ದಾಣಗಳಲ್ಲಿ ಹಾಲುಣಿಸುವ ಕೊಠಡಿಗಳು ಲಭ್ಯವಿದೆ. ಮಗುವಿಗೆ ಹಾಲುಣಿಸುವ ತಾಯಂದಿರ ಖಾಸಗೀತನವನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.