Sunday, January 11, 2026

AQ | ನೆಮ್ಮದಿಯ ಉಸಿರು! ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ.

ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Benefits | ಬಡವರ ಬಾದಾಮಿ ‘ಶೇಂಗಾ’: ತೂಕ ಇಳಿಕೆಗೆ ಇದು ವರವೋ ಅಥವಾ ಶಾಪವೋ?

ಬೆಂಗಳೂರಿನ ಗಾಳಿಯ ಗುಣಮಟ್ಟ 154 ಇದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳಿನಲ್ಲಿ ಒಮ್ಮೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್​, ವೈಟ್​ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ಇಂದು ಬೆಂಗಳೂರಿನ PM2.5 59 ಮತ್ತು PM10 76 ಇದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆದರೆ ಬೆಂಗಳೂರಿನಲ್ಲಿಂದು ಈ ಸೂಕ್ಷ್ಮ ಕಣಗಳ ಪ್ರಮಾಣ ಕಡಿಮೆಯಿದ್ದು, ಉಸಿರಾಟಕ್ಕೆ ಯೋಗ್ಯವಲ್ಲದಿದ್ದರೂ ಮುಂಚಿನ ದಿನಗಳಷ್ಟು ಹಾನಿಕಾರಕವೇನಲ್ಲ.

error: Content is protected !!