ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಕೊರೋನಾದಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ತಾಯಿಗೆ ಉಸಿರು ನೀಡಿ ಬದುಕಿಸಿಕೊಳ್ಳಲು ಇಬ್ಬರು ಹೆಣ್ಣು ಮಕ್ಕಳು ಹೋರಾಟ ನಡೆಸಿದ ಘಟನೆ ನಡೆದಿದೆ
ಕೊರೋನಾದಿಂದ ತಾಯಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಈ ವೇಳೆ ಚಿಕಿತ್ಸೆ ಸಿಗದ ಹಿನ್ನೆಲೆ ಇಬ್ಬರು ಹೆಣ್ಣು ಮಕ್ಕಳು ದಿಕ್ಕು ತೋಚದಂತಾಗಿ ಬಾಯಿಂದ ಬಾಯಿಗೆ ಉಸಿರು ನೀಡಿದ್ದಾರೆ.
ಇಲ್ಲಿನ ಬಹ್ರೇಚ್ನ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದಾಗಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣಕ್ಕೆ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಆದರೂ ಆಕೆ ಬದುಕುಳಿಯಲಿಲ್ಲ.ಈ ವೇಳೆ ಮಹಿಳೆ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಈ ವೇಳೆ ಇಬ್ಬರು ಹೆಣ್ಣು ಮಕ್ಕಳು ಅವಳಿಗೆ ತಮ್ಮ ಉಸಿರು ನೀಡುವ ಮೂಲಕ ಬದುಕಿಸುವ ಯತ್ನ ನಡೆಸಿರುವ ದೃಶ್ಯ ಎಲ್ಲರ ಕರುಳು ಹಿಂಡುವಂತಿದೆ.