ಹೊಸದಿಗಂತ ವರದಿ, ಮಂಡ್ಯ :
ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಿಸಲು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ಅನಿಲ್‌ಕುಮಾರ್ ಲೋಕಾಯುಕ್ತ ಪೊಲೀಸರಿಗೆಸಿಕ್ಕಿಬಿದ್ದಿದ್ದು, ಕಾಮಗಾರಿ ಮಾಡಿದ ಬಿಲ್ ಹಣ ಬಿಡುಗಡೆ ಮಾಡಿಸಲು 50 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.
ಈ ಸಂಬಂಧ ಕೋಲಕನದೊಡ್ಡಿ ಚನ್ನಬಸಪ್ಪ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಸೋಮವಾರ ರಾತ್ರಿ ನಗರದ ಲೋಕಾಯುಕ್ತ ಕಚೇರಿ ಸಮೀಪದ ಹೊಟೇಲ್‌ನಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಸುನಿಲ್‌ಕುಮಾರ್ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಮೋಹನ್ ರೆಡ್ಡಿ, ಜಯರತ್ನಾ, ಸಿಬ್ಬಂದಿಗಳಾದ ಮಹದೇವಸ್ವಾಮಿ, ಶರತ್, ಶಂಕರ್ ದಾಳಿಯಲ್ಲಿ ಪಾಲ್ಗೊಂಡಿದ್ದರು.