ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ತಪ್ಪು ಮಾಡಿದ್ದು ಯಾರೇ ಆಗಲಿ ಅವರನ್ನು ರಕ್ಷಿಸುವ ಮಾತೇ ಇಲ್ಲ. ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಯಾರೂ ಮಧ್ಯಪ್ರವೇಶ ಮಾಡೋದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನೆಲ್ಲಾ ಆಗಬೇಕೋ ಅದು ಖಂಡಿತಾ ಆಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಯಾವ ವಿಷಯಕ್ಕೆ ಪ್ರತಿಭಟನೆ ಮಾಡೋದಿಲ್ಲ, ಇದಕ್ಕೆ ಉತ್ತರ ನೀಡೋದಿಲ್ಲ ಎಂದಿದ್ದಾರೆ.