ಹಾಸನ ಡಿಸಿ ವಿರುದ್ಧ ಲಂಚದ ಆರೋಪ ಕೇಸ್: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸೈಬರ್ ಪೊಲೀಸರ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹಾಸನದಿಂದ ಬೆಂಗಳೂರಿನ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾದರಾದರೂ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಏನಿದು ಪ್ರಕರಣ? ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರಿಗೆ 75 ಲಕ್ಷ ರೂಪಾಯಿ … Continue reading ಹಾಸನ ಡಿಸಿ ವಿರುದ್ಧ ಲಂಚದ ಆರೋಪ ಕೇಸ್: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸೈಬರ್ ಪೊಲೀಸರ ನೋಟಿಸ್