ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದಲ್ಲಿ ಇಟ್ಟಿಗೆ ಟ್ರ್ಯಾಕ್ಟರ್‌ಗೆ ರಾಜಹಂಸ ಬಸ್ ಡಿಕ್ಕಿಯಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಚಳ್ಳಕೆರೆಯ ಹಿರೇಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದುವೆ ಮನೆಗೆ ಹೋಗಿದ್ದವರು, ಮದುವೆ ಮುಗಿಸಿ ಮನೆಗೆ ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ. ಬಸ್ ಇಡೀ ಕುಟುಂಬದವರೇ ಇದ್ದು, ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ.