ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
13ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಸೆ.9ರಂದು ಪ್ರಧಾನಿ ಮೋದಿ ವರ್ಚುವಲ್ ಆಗಿ ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳಾದ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಗ್ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.
ಬ್ರಿಕ್ಸ್ ಸಭೆಯಲ್ಲಿ ಭಾರತದ ಭದ್ರತಾ ಸಲಹೆಗಾರ ಅಜಿತ್ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಭಾಗವಹಿಸಲಿದ್ದಾರೆ.
2012 ಹಾಗೂ 2016ರಲ್ಲಿ ಭಾರತ ಬ್ರಿಕ್ಸ್ ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಈ ವರ್ಷ ಮತ್ತೆ ಭಾರತದ ಜವಾಬ್ದಾರಿ ಹೊಂದಿದೆ.
ಈ ವೇಳೆ ಬ್ರಿಕ್ಸ್ ರಾಷ್ಟ್ರದ ನಾಯಕರು ಅಂತಾರಾಷ್ಟ್ರ ಸಹಕಾರ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಅಭಿವೃದ್ಧಿ, ಡಿಜಿಟಲ್ ಮತ್ತು ತಂತ್ರಜ್ಞಾನ ಬಳಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.