October 8, 2026
Thursday, October 8, 2026
spot_img

ಬ್ರಿಕ್ಸ್‌ ಶೃಂಗಸಭೆ | 7 ವರ್ಷಗಳ ಬಳಿಕ ಭಾರತಕ್ಕೆ ಕ್ಸಿ ಜಿನ್‌ಪಿಂಗ್: ದೆಹಲಿಯಲ್ಲಿ ಹೇಗಿದೆ ತಯಾರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾವಹಿಸುವ ಸಲುವಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಏಳು ವರ್ಷಗಳ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿದೆ.

ದೆಹಲಿಯಲ್ಲಿ ಹೇಗಿದೆ ಸಿದ್ಧತೆ?

ಚೀನಾದ ಅಧ್ಯಕ್ಷರ ಜತೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಭಾರತಕ್ಕೆ ಆಗಮಿಸುತ್ತಿರುವುದರಿಂದ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಸಾಕಷ್ಟು ಬಿಗಿಗೊಳಿಸಲಾಗಿದೆ.

ಚೀನಾ ಮತ್ತು ರಷ್ಯಾ ಅಧ್ಯಕ್ಷರ ಭದ್ರತಾ ತಂಡಗಳು ಈಗಾಗಲೇ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಭದ್ರತಾ ಉಪಕರಣಗಳೊಂದಿಗೆ ದೆಹಲಿಗೆ ಆಗಮಿಸಿವೆ.

ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಂಗಲಿರುವ ಹೋಟೆಲ್‌ಗಳ ಸುತ್ತಮುತ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

30,000 ಭದ್ರತಾ ಸಿಬ್ಬಂದಿ ನಿಯೋಜನೆ

ವಿಮಾನ ನಿಲ್ದಾಣ, ಹೋಟೆಲ್‌ಗಳು ಮತ್ತು ಭಾರತ ಮಂಟಪ ಸೇರಿದಂತೆ ಶೃಂಗಸಭೆಯ ಪ್ರಮುಖ ಸ್ಥಳಗಳಲ್ಲಿ ಒಟ್ಟು 30,000 ಭದ್ರತಾ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಇವರಲ್ಲಿ ಸುಮಾರು ಅರ್ಧದಷ್ಟು ದೆಹಲಿ ಪೊಲೀಸ್ ಸಿಬ್ಬಂದಿಯಾಗಿದ್ದು, ಉಳಿದವರು ಅರೆಸೈನಿಕ ಪಡೆಗಳಾಗಿದ್ದಾರೆ.

ಕ್ಸಿ ಜಿನ್‌ಪಿಂಗ್ ಮತ್ತು ಪುಟಿನ್ ತಮ್ಮದೇ ವಿಶೇಷ ವಾಹನ ಹಾಗೂ ಕಾನ್ವಾಯ್‌ ವಾಹನಗಳನ್ನು ವಿಮಾನದ ಮೂಲಕ ಭಾರತಕ್ಕೆ ತರಿಸಿಕೊಳ್ಳುತ್ತಿದ್ದಾರೆ.

ಇರಾನ್ ಅಧ್ಯಕ್ಷರು ಪ್ರತ್ಯೇಕ ಹೋಟೆಲ್‌ನಲ್ಲಿ ತಂಗಲಿದ್ದು, ಕ್ಸಿ ಜಿನ್‌ಪಿಂಗ್ ಮತ್ತು ಬೆಲಾರಸ್ ಅಧ್ಯಕ್ಷರು ಒಂದೇ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಪುಟಿನ್ ಹಾಗೂ ಬಾಂಗ್ಲಾದೇಶದ ವಿಐಪಿ ಗಣ್ಯರಿಗೆ ಮತ್ತೊಂದು ಹೋಟೆಲ್‌ನಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಇತರ ರಾಷ್ಟ್ರಗಳ ಗಣ್ಯರಿಗೂ ಪ್ರತ್ಯೇಕ ಹೋಟೆಲ್‌ಗಳಲ್ಲಿ ವಸತಿ ಕಲ್ಪಿಸಲಾಗಿದೆ.

Must Read