ಗುಜರಾತ್‌ನಲ್ಲಿ ಸೇತುವೆ ಕುಸಿತ: ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳೆದ 4 ವರ್ಷಗಳಲ್ಲಿ ಗುಜರಾತ್‌ನಲ್ಲಿ16 ಸೇತುವೆ ಕುಸಿತ ದುರಂತಗಳು ಸಂಭವಿಸಿದ್ದು, ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಎಸ್‌ಐಟಿ ತನಿಖೆ ಆಗದೇ ಇದ್ದಲ್ಲಿ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ಎಚ್ಚರಿಸಿದೆ. ವಡೋದರ ಸೇತುವೆ ಕುಸಿತ ದುರಂತದ ಬೆನ್ನಲ್ಲೇ ಕಾಂಗ್ರೆಸ್ ಈ ವಿಚಾರ ಪ್ರಸ್ತಾಪಿಸಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜೀನಾಮೆ ನೀಡಬೇಕು ಎಂದೂ ಪಟ್ಟುಹಿಡಿದಿದೆ.

‘ದೇಶದಲ್ಲಿ ಅಪಘಾತಗಳು ಸಾಮಾನ್ಯವಾಗಿವೆ. ಕೆಲವೊಮ್ಮೆ ರೈಲು ಅಪಘಾತಗಳಾಗುತ್ತಿದ್ದರೆ ಮತ್ತೊಮ್ಮೆ ಹೊಸದಾಗಿ ನಿರ್ಮಿಸಿದ ಸೇತುವೆಗಳಲ್ಲೇ ಬಿರುಕು ಕಾಣಿಸಿಕೊಳ್ಳುತ್ತದೆ. ವಿಮಾನ ದುರಂತದ ನೋವಿನಿಂದ ದೇಶ ಚೇತರಿಸಿಕೊಳ್ಳುವ ಮೊದಲೇ ಗುಜರಾತ್‌ನ ಸೇತುವೆ ದುರಂತ ನಡೆದಿದೆ’. 3 ವರ್ಷದ ಹಿಂದೆಯೇ ಸೇತುವೆ ಅಪಾಯದ ಸ್ಥಿತಿಯಲ್ಲಿದೆ ಎಂದು ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. 2021ರಿಂದ ಇದು 7ನೇ ಸೇತುವೆ ಕುಸಿತ ಘಟನೆಯಾಗಿದೆ. ಆಡಳಿತದ ಸೋಗಿನಲ್ಲಿ ಭಾಷಣಗಳನ್ನು ಮಾಡತ್ತಾ, ಜಾಹೀರಾತುಗಳನ್ನು ನೀಡುವುದರಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ. ಬಿಜೆಪಿಯ ನಿರ್ಲಕ್ಷ್ಯದ ವರ್ತನೆ ಮಿತಿ ಮೀರಿದೆ’ ಎಂದೂ ಖರ್ಗೆ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!