ಮಧ್ಯಕ್ಕೇ ಕುಸಿದ ಸೇತುವೆ: ಮೃತರ ಸಂಖ್ಯೆ 8ಕ್ಕೆ ಏರಿಕೆ, 5 ವಾಹನಗಳು ನದಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆಯ  ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಈವರೆಗೂ ಎಂಟು ಮಂದಿ ಮೃತಪಟ್ಟಿದ್ದಾರೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು.ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನಗಳು ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು ರಕ್ಷಿಸಲಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!