ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದಿದ್ದು, ಓರ್ವ ಮೃತಪಟ್ಟಿದ್ದಾರೆ. ಸೇತುವೆ ಅವಶೇಷಗಳಡಿ 30 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಬಂದಿರುವ ಮಾಹಿತಿಯ ಪ್ರಕಾರ ಈ ಸೇತುವೆಯನ್ನು ಭಾರತಮಾಲಾ ಯೋಜನೆಯಡಿ ನಿರ್ಮಿಸಲಾಗುತ್ತಿದೆ . ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸ್ಥಳೀಯರ ನೆರವು ಪಡೆಯಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!