ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರಂತರವಾಗಿ ಸುರಿಯುತ್ತಿರುವ ರಣಭೀಕರ ಮಳೆಯ ಹಿನ್ನೆಲೆ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ಸೇತುವೆ ಪಕ್ಕ ವಾಹನ ಓಡಾಟಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಧಾರಾಕಾರ ಮಳೆಗೆ ಇದೀಗ ರಸ್ತೆ ಕೊಚ್ಚಿ ಹೋಗಿದೆ.
ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಗೋವಾಗೆ ಪ್ರಯಾಣಿಸಲು ಸೂಚನೆ ನೀಡಲಾಗಿದೆ.