Monday, October 3, 2022

Latest Posts

ನವೀನ ರೀತಿಯ ಕಾರ್ಯಕ್ರಮ ರೂಪಿಸುವ ಮೂಲಕ ಮೈಸೂರು ದಸರಾಗೆ ಮೆರುಗು: ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ, ಮೈಸೂರು:

ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬoಧ ಉಪಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದoತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ದಸರಾ ಉಪಸಮಿತಿಗಳ ಸಿದ್ದತೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ನವೀನ ರೀತಿಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಸರಾಗೆ ಮೆರುಗು ತರಬೇಕು. ವಿದ್ಯುತ್ ದೀಪಾಲಂಕಾರ ಆಕರ್ಷಕವಾಗಿ ಇರಬೇಕು. ಶಿಷ್ಠಾಚಾರದಲ್ಲಿ ಯಾವುದೇ ರೀತಿಯ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ದಸರಾ ಉಪ ಸಮಿತಿಗಳು ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ. ಈ ಬಾರಿಯು ರೈತ ದಸರಾ, ಯೋಗದಸರಾ, ಚಲನಚಿತ್ರೋತ್ಸವ, ದಸರಾ ಕುಸ್ತಿ, ಯುವದಸರಾ, ಯುವಸಂಭ್ರಮ, ಮಹಿಳಾ ದಸರಾ, ಮತ್ಸ ಪ್ರದರ್ಶನ ಮತ್ತು ಮಾರಾಟ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆಸಬೇಕು ಎಂದು ಸಮಿತಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೈಸೂರು ನಗರ ಆಯುಕ್ತರಾದ ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಚೇತನ್, ಅಪರ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ಸಮಿತಿಗಳ ಕಾರ್ಯಾದ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!