July 11, 2026
Saturday, July 11, 2026
spot_img

ಬ್ರಿಮ್ಸ್ ಆಸ್ಪತ್ರೆಗೆ ಉಪಲೋಕಾಯುಕ್ತರ ದಿಢೀರ್ ಶಾಕ್: ಲ್ಯಾಬ್‌ನಲ್ಲಿ ಕಂತೆ ಕಂತೆ ಅಕ್ರಮ ಹಣ, ಚೆಕ್ ಜಪ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೀದರ್‌ನ ಜಿಲ್ಲಾ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಉಪಲೋಕಾಯುಕ್ತರು ಬ್ರೇಕ್ ಹಾಕಿದ್ದಾರೆ. ಆಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಿದ ಸಂದರ್ಭದಲ್ಲಿ, ಪ್ರಯೋಗಾಲಯದಲ್ಲಿ ಲಕ್ಷಾಂತರ ರೂ. ನಗದು ಮತ್ತು ಚೆಕ್‌ಗಳು ಪತ್ತೆಯಾಗಿದ್ದು, ಇಲಾಖೆಯ ಅಧಿಕಾರಿಗಳು ಸ್ಥಳದಲ್ಲೇ ಜಪ್ತಿ ಮಾಡಿದ್ದಾರೆ.

ಲ್ಯಾಬ್ ಟೆಕ್ನಿಷಿಯನ್ ಬ್ಯಾಗ್‌ನಲ್ಲಿ ಸಿಕ್ತು ಲಕ್ಷ ಲಕ್ಷ ನಗದು!

ಉಪಲೋಕಾಯುಕ್ತರ ಪರಿಶೀಲನೆ ವೇಳೆ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಸಂಜುಕುಮಾರ್ ಕೊಠಡಿ ಮತ್ತು ಡ್ರಾಯರ್‌ಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಯಾವುದೇ ಅಧಿಕೃತ ದಾಖಲೆಗಳಿಲ್ಲದ 1 ಲಕ್ಷಕ್ಕೂ ಅಧಿಕ ನಗದು ಹಾಗೂ ಲಕ್ಷಾಂತರ ರೂ. ಮೌಲ್ಯದ ಚೆಕ್‌ಗಳು ಪತ್ತೆಯಾಗಿವೆ. ರೋಗಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿತ್ತು ಎಂಬ ಸಂಶಯದ ಮೇರೆಗೆ ಲೋಕಾಯುಕ್ತ ಪೊಲೀಸರು ತಕ್ಷಣವೇ ಆ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:

ಸುಮೊಟೊ ಪ್ರಕರಣ ದಾಖಲಿಸಲು ಖಡಕ್ ಆದೇಶ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಕಂಡುಬಂದ ಕಳಪೆ ನಿರ್ವಹಣೆ, ರೋಗಿಗಳಿಗೆ ಕನಿಷ್ಠ ಮೂಲಸೌಕರ್ಯ ನೀಡದ ನಿರ್ಲಕ್ಷ್ಯ ಮತ್ತು ಪತ್ತೆಯಾದ ಅಕ್ರಮ ಹಣದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಇಡೀ ಸಾಕ್ಷ್ಯಧಾರಗಳ ಆಧಾರದ ಮೇಲೆ ತಕ್ಷಣವೇ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ   ಆದೇಶ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !