ಸುಡಾನ್‌ನಲ್ಲಿ ಸಂಘರ್ಷ: 31 ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತನ್ನಿ, ಸಿದ್ಧರಾಮಯ್ಯ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕಳೆದೆರಡು ದಿನಗಳಿಂದ ಸುಡಾನ್‌ನಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದ ಅಶಾಂತಿ, ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಕನ್ನಡಿಗರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಸುಮಾರು 60 ಭಾರತೀಯರು ಅಲ್ಲಿ ಸಂಕಷ್ಟದಲ್ಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ದಾವಿಸಬೇಕು ಎಂದು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ಸುಡಾನ್‌ನ ವಿವಿಧೆಡೆ ಕಳೆದೆರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ತೀವ್ರ ಘರ್ಷಣೆ ಮುಂದುವರಿದಿದ್ದು, ಕನಿಷ್ಠ 200 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 1800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!