ಬ್ರಿಟನ್‌ನ ರಾಜ 3ನೇ ಚಾರ್ಲ್ಸ್ ಗೆ ಕ್ಯಾನ್ಸರ್‌: ಶೀಘ್ರವೇ ಗುಣಮುಖರಾಗುವಂತೆ ಪ್ರಧಾನಿ ಮೋದಿ ಹಾರೈಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ಯಾನ್ಸರ್‌ನಿಂದ ಬ್ರಿಟನ್‌ನ ( Great Britain) ರಾಜ 3ನೇ ಚಾರ್ಲ್ಸ್ (Cancer) ಬಳಲುತ್ತಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಾರೈಸಿದ್ದಾರೆ.

ಕಿಂಗ್ ಚಾರ್ಲ್ಸ್ 3 (King Charles III. ) ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಬಕಿಂಗ್ಹ್ಯಾಮ್‌ ಅರಮನೆ (Buckingham Palace) ಸ್ಪಷ್ಟಪಡಿಸಿದೆ. ಹೀಗಿದ್ದರೂ ಈ ಅವಧಿಯಲ್ಲಿ ಅಧಿಕೃತ ಕೆಲಸವನ್ನು ಮುಂದುವರಿಸುತ್ತಾರೆ ಎಂದು ಬಕಿಂಗ್ಹ್ಯಾಮ್‌ ಅರಮನೆ ಸ್ಪಷ್ಟಪಡಿಸಿದೆ.

ಈ ವಿಷಯದ ಬಗ್ಗೆ ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆರೋಗ್ಯಕ್ಕೆ ಹಾರೈಸಿದ್ದಾರೆ. “3 ಚಾರ್ಲ್ಸ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರಿಗೆ ಒಳ್ಳೆ ಆರೋಗ್ಯ ಸಿಗಲಿ. ಅದಕ್ಕೆ ನಾನು ಭಾರತದ ಜನರೊಂದಿಗೆ ಸೇರಿ ಹಾರೈಸುತ್ತೇನೆ” ಎಂದು ಅವರ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಅವರು ಸಹ ಚಾರ್ಲ್ಸ್‌ ಅವರಿಗೆ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದು, ಅವರು ಶೀಘ್ರವೇ ಪೂರ್ಣ ಶಕ್ತಿಯೊಂದಿಗೆ ಮರಳುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ ಎಂದು ಹಾರೈಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!