ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಕ್ ಗೆ ಪ್ರಧಾನಿ ಮೋದಿ ಅಭಿನಂದನೆ: ಭಾರತ-ಯುಕೆ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಕ್ ಅವರಿಗೆ ಕರೆ ಮಾಡಿ ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು.

ಇಬ್ಬರೂ ನಾಯಕರು ಭಾರತ ಮತ್ತು ಯುಕೆ ನಡುವಿನ ಪಾಲುದಾರಿಕೆ ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತನಾಡಿದರು. ಮುಕ್ತ ವ್ಯಾಪಾರ ಒಪ್ಪಂದವನ್ನು ಸಾಧ್ಯವಾದಷ್ಟು ಬೇಗ ಮುಗಿಸಲು ಒಪ್ಪಿಕೊಂಡರು.

ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಪ್ರಧಾನಿ ನರೇಂದ್ರ ಮೋದಿ, ಇಂದು ರಿಷಿ ಸುನಕ್ ಅವರೊಂದಿಗೆ ಮಾತನಾಡಲು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದೆನು. ನಮ್ಮ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಗ್ರ ಮತ್ತು ಸಮತೋಲಿತ ಎಫ್ಟಿಎಯನ್ನು ಶೀಘ್ರ ಮುಕ್ತಾಯಗೊಳಿಸುವ ಪ್ರಾಮುಖ್ಯತೆ ಬಗ್ಗೆ ನಾವು ಒಪ್ಪಿಕೊಂಡಿದ್ದೇವೆ’ ಎಂದು ಹೇಳಿದ್ದಾರೆ.

ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು ಪ್ರಧಾನಿ ಮೋದಿ ಅವರ ಮಾತುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!