ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಡೆದ ದುರಂತ ನೂಕುನುಗ್ಗಲಿನಲ್ಲಿ 11 ಜನರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಕ್ಕೆ ಮಾಜಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025ರ ಗೆಲುವಿನ ಸಂಭ್ರಮಾಚರಣೆಯ ವೇಳೆ ಈ ಘಟನೆ ಸಂಭವಿಸಿದೆ.
ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ, ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಮಾಜಿ ಬ್ರಿಟಿಷ್ ಪ್ರಧಾನಿ X ಸೇರಿದಂತೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ನನ್ನ ಮತ್ತು ಅಕ್ಷತಾ ಅವರ ಹೃದಯಗಳು ಬೆಂಗಳೂರಿನ ದುರಂತ ಘಟನೆಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇದೆ. ನಿನ್ನೆ ನಿಮ್ಮೊಂದಿಗೆ ನಾವು ಸಂಭ್ರಮಿಸಿದೆವು ಮತ್ತು ಇಂದು ನಿಮ್ಮೊಂದಿಗೆ ದುಃಖಿಸುತ್ತಿದ್ದೇವೆ ಎಂದು ಸುನಕ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.