ಅಶ್ಲೀಲ, ಅಸಭ್ಯ ಕಂಟೆಂಟ್‌ ಪ್ರಸಾರ: 18 ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಗೇಟ್ ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (Ministry of Information and Broadcasting) 18 ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

19 ವೆಬ್‌ಸೈಟ್‌ಗಳು, 10 ಅಪ್ಲಿಕೇಶನ್‌ಗಳು (ಗೂಗಲ್ ಪ್ಲೇ ಸ್ಟೋರ್‌ನಲ್ಲಿ 7, ಆ್ಯಪಲ್ ಆಪ್ ಸ್ಟೋರ್‌ನಲ್ಲಿ 3), ಒಟಿಟಿ ಪ್ಲಾಟ್‌ಫಾರ್ಮ್‌ಗಳ 57 ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್, ಸೃಜನಶೀಲ ಅಭಿವ್ಯಕ್ತಿ ಹೆಸರಿನಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅಶ್ಲೀಲತೆ, ಅಸಭ್ಯ ಕಂಟೆಂಟ್‌ಗಳನ್ನು ಪ್ರಸಾರ ಮಾಡದಂತೆ ನೋಡಿಕೊಳ್ಳುವುದು ಆಯಾ ಪ್ಲಾಟ್‌ಫಾರ್ಮ್‌ ಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದುತಿಳಿಸಿದ್ದಾರೆ.

ಐಟಿ ಕಾಯಿದೆ, ಭಾರತೀಯ ದಂಡ ಸಂಹಿತೆ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!