ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಗಿದ್ದಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಅಣ್ಣ ತಂಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಟಗೇರಿ ಗ್ರಾಮದಲ್ಲಿ ನಡೆದಿದೆ.
ಅಣ್ಣ ಕೋಟ್ರೇಶ್ (32) ಹಾಗೂ ತಂಗಿ ಕಾವ್ಯಾ (28) ಮೃತ ದುರ್ದೈವಿಗಳು.
ನಿನ್ನೆ ತಡರಾತ್ರಿಯೇ ಅಣ್ಣ-ತಂಗಿ ಮೃತಪಟ್ಟಿದ್ದು, ಇಂದು (ಭಾನುವಾರ) ಬೆಳಗ್ಗೆ ಸಂಬಂಧಿಕರೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಚಿಗಟೇರಿ ಪೊಲೀಸರು ಹಾಗೂ ಜಯನಗರ ಎಸ್ಪಿ ಹರಿಬಾಬು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಆಸ್ತಿಗಾಗಿ ಅಣ್ಣ-ತಂಗಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೆತ್ತುಕೊಂಡಿದ್ದಾರೆ.